ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ - ಹುಬ್ಬಳ್ಳಿ ಸೆಕ್ಯುರಿಟಿ ಗಾರ್ಡ್​ ಕೊಲೆ

ಹುಬ್ಬಳ್ಳಿಯ ಐಟಿ ಪಾರ್ಕ್​ನಲ್ಲಿ ಸೆಕ್ಯುರಿಟಿ ಗಾರ್ಡ್​ವೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

security-guard-dead-body-found-burned-in-hubballi
ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

By

Published : Feb 25, 2022, 6:14 PM IST

ಹುಬ್ಬಳ್ಳಿ: ನಗರದ ಐಟಿ ಪಾರ್ಕ್​ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿತದಲ್ಲಿ ಸೆಕ್ಯುರಿಟಿ ಗಾರ್ಡ್​ವೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಮೃತ ವ್ಯಕ್ತಿ. ಈತ ಮೂಲತಃ ಧಾರವಾಡದ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಹುಬ್ಬಳ್ಳಿಯ ನೇಕಾರನಗರದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ.

ಈತ ಐಟಿ ಪಾರ್ಕ್​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದು, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹರ್ಷ ಕೊಲೆ ಪ್ರಕರಣ: ಬಂಧಿತ 10 ಆರೋಪಿಗಳು 11 ದಿನ ಪೊಲೀಸ್​​ ಕಸ್ಟಡಿಗೆ

ಘಟನೆಗೆ ಕಾರಣ ಇನ್ನೂ ಎಂಬುದು ತಿಳಿದುಬಂದಿಲ್ಲ. ಪೊಲೀಸ್ ತನಿಖೆಯ ನಂತರವೇ ಘಟನೆಗೆ ಸೂಕ್ತ ಕಾರಣ ಹಾಗೂ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ABOUT THE AUTHOR

...view details