ಧಾರವಾಡ:ಕೊರೊನಾ ಸೋಂಕಿನಿಂದ ಬಳಲುತ್ತಿರುವ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಎಸ್ಡಿಎಂ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಹಿರಿಯ ಸಾಹಿತಿ ಚೆನ್ನವೀರ ಕಣವಿ ಆರೋಗ್ಯ ಸ್ಥಿರ: ಚಿಕಿತ್ಸೆ ಮುಂದುವರಿಕೆ - Senior Literature Chennaveera Kanavi Health in Stable
ಕೋವಿಡ್ ಸೋಂಕಿನಿಂದ ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹಿರಿಯ ಸಾಹಿತಿ ಚೆನ್ನವೀರ ಕಣವಿ ಆರೋಗ್ಯ ಸ್ಥಿರ
ಡಾ.ಚೆನ್ನವೀರ ಕಣವಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಅಧೀಕ್ಷಕರು ಡಿಸಿಯವರು ನಿರಂತರ ಸಂಪರ್ಕದಲ್ಲಿದ್ದು, ಪ್ರತಿದಿನ ಜಿಲ್ಲಾಧಿಕಾರಿಗಳು ಖುದ್ದು ಆಸ್ಪತ್ರೆಗೆ ತೆರಳಿ ಕಣವಿಯವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಕೋವಿಡ್ ಅಬ್ಬರ: ಜಿಲ್ಲಾವಾರು ಕೋವಿಡ್ ಪ್ರಕರಣಗಳ ಮಾಹಿತಿ
TAGGED:
ಧಾರವಾಡ ಜಿಲ್ಲಾಡಳಿತ ಮಾಹಿತಿ