ಹುಬ್ಬಳ್ಳಿ/ಧಾರವಾಡ : ಜಿಲ್ಲೆಯ ನವಲಗುಂದ, ಕುಂದಗೋಳ, ಧಾರವಾಡ ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಕಡಲೆ ಬಿತ್ತನೆ ಬೀಜದ ಕೊರತೆ ಕಾಡುತ್ತಿದೆ.
ರಾಜ್ಯ ಸರ್ಕಾರ ರೈತ ಸಂಪರ್ಕ ಕೇಂದ್ರದಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಇದು ರೈತರಿಗೆ ಕಿರಿಕಿರಿ ತಂದಿದೆ. ಯಾವುದೇ ಬೀಜ ಖರೀದಿಗೆ ಆನ್ಲೈನ್ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕಿದೆ. ಆದರೆ, ರೈತ ಸಂಪರ್ಕ ಕೇಂದ್ರದಲ್ಲಿ ಸರ್ವರ್ ಸಮಸ್ಯೆ ಕಾಡುತ್ತಿದೆ ಎಂದು ರೈತರು ಗೋಳಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ 1,75,407 ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಬಿತ್ತನೆಯ ಗುರಿಯನ್ನು ಕೃಷಿ ಇಲಾಖೆ ಗುರಿ ಇರಿಸಿದೆ. ಅದರಲ್ಲಿ 87,220 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೀಜ ಬಿತ್ತನೆಯ ಗುರಿ ಹೊಂದಲಾಗಿದೆ. ಹೀಗಾಗಿ, ರೈತರು ನಿತ್ಯ ರೈತ ಸಂಪರ್ಕ ಕೇಂದ್ರದ ಎದುರು ಸರತಿ ಸಾಲಿನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ನಿಂತು ಬೀಜಕ್ಕಾಗಿ ಅಲೆದಾಟ ನಡೆಸುತ್ತಿದ್ದಾರೆ.