ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ - ಕಲಘಟಗಿ ಬಾಲಕಿಗೆ ಲೈಂಗಿಕ ಕಿರುಕುಳ

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ‌ ಕಲಘಟಗಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

sexual-harassment-on-girl-in-kalaghatagi
ಹುಬ್ಬಳ್ಳಿ: 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

By

Published : Jun 9, 2022, 5:04 PM IST

ಹುಬ್ಬಳ್ಳಿ:ಹೊಲಕ್ಕೆ ಊಟದ ಬುತ್ತಿ ತೆಗೆದುಕೊಂಡು ಹೋಗುತ್ತಿದ್ದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ‌ ಕಲಘಟಗಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದಲ್ಲಿ ಕೋಳಿ ಫಾರ್ಮ್ ನಡೆಸುವ ಮಹ್ಮದ್ ಮುಲ್ಲಾನವರ ಎಂಬಾತ ದುಷ್ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ.

ಕೃತ್ಯದ ಬಳಿಕ ಆರೋಪಿ ಮಹ್ಮದ್ ಮುಲ್ಲಾನವರ ನಾಪತ್ತೆಯಾಗಿದ್ದಾನೆ. ಸಂತ್ರಸ್ತ ಬಾಲಕಿಗೆ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಗ್ರಾಮ ಪಂಚಾಯತ್​ ಸದಸ್ಯನ ಹತ್ಯೆಗೆ ಸುಪಾರಿ.. ಆರೋಪಿ ಪೊಲೀಸ್​ ಕಾನ್​ಸ್ಟೇಬಲ್​ ಪರಾರಿ

ABOUT THE AUTHOR

...view details