ಧಾರವಾಡ:ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಗ್ರಾಮವೊಂದರಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು, ಗ್ರಾಮದ ಹುಸೇನಸಾಬ ಮರ್ದಾನಸಾಬ ಬಾಳಣ್ಣವರ ಎಂಬಾತನೇ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಈತ ಸಂಜೆ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆಗ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಅಕ್ಕಪಕ್ಕದವರು ಓಡಿ ಬರುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಸೇನ ಸಾಬನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಸಿಪಿಐ ಎಸ್.ಸಿ.ಪಾಟೀಲ ಮತ್ತು ಮಹಿಳಾ ಠಾಣೆಯ ಸಿಪಿಐ ಬಸವರಾಜ ಕಾಮನಬೈಲ್ ಗ್ರಾಮಕ್ಕೆ ಭೇಟಿ ನೀಡಿದ್ದರು.