ಧಾರವಾಡ :ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಸಲೀಂ ಹೇಳಿಕೆ ವಿಚಾರವಾಗಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರತಿಕ್ರಿಯಿಸಿದ್ದಾರೆ. ಅವರು ಸತ್ಯವನ್ನೇ ಹೇಳಿದ್ದಾರೆ. ಸತ್ಯವನ್ನು ಮುಚ್ಚಿಡೋಕೆ ಸಾಧ್ಯವಿಲ್ಲ. ಅದನ್ನು ಕಾಂಗ್ರೆಸ್‌ನವರೇ ಸಾಬೀತುಪಡಿಸಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಅವರ ಪಕ್ಷದವರೇ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಡಿಕೆಶಿ ಕಲೆಕ್ಷನ್ ಗಿರಾಕಿ ಅಂದಿರುವ ವಿಚಾರ ಈ ಬಗ್ಗೆ ಅವರ ಪಕ್ಷದವರೇ ಮಾತಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದು ಸೂಕ್ತವಲ್ಲ ಎಂದರು.