ಹುಬ್ಬಳ್ಳಿ:ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಬಹುಮತದಿಂದ ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಉತ್ತಮವಾದ ನಾಯಕತ್ವದಲ್ಲಿ ಸರ್ಕಾರ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕೆ ಶಕ್ತಿ ಹೆಚ್ಚಿಸಿದಂತಾಗಿದೆ ಎಂದರು.
ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ: ಶಂಕರ ಪಾಟೀಲ ಮುನೇನಕೊಪ್ಪ.. - ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ವೈಯಕ್ತಿಕ ಟೀಕೆಗಳನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.
ಶಂಕರ ಪಾಟೀಲ ಮುನೇನಕೊಪ್ಪ
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ವೈಯಕ್ತಿಕ ಟೀಕೆಗಳನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಎರಡು ಪಕ್ಷದವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಜನರು ಪ್ರಜ್ಞಾವಂತರಿದ್ದಾರೆ. ಅವರಿಗೆ ಸರಿಯಾದ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.
ಓದಿ:ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ಹೆಂಡತಿ, ಸಂಬಂಧಿಗೆ ಗುಂಡಿಕ್ಕಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ