ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ನಡುವಿನ ಶೀತಲ ಸಮರದ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದ್ರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಇಬ್ಬರು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಕಮಿಷನರ್ ಹಾಗೂ ಡಿಸಿಪಿ ನಡುವಿನ ಶೀತಲ ಸಮರ ಗಮನಕ್ಕೆ ಬಂದಿದೆ: ಶೆಟ್ಟರ್ - dcp and commissioner cold war
ಹುಬ್ಬಳ್ಳಿ ಧಾರವಾಡ ಕಮಿಷನರ್ ಹಾಗೂ ಡಿಸಿಪಿ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಈ ನಡುವೆ, ಸಚಿವ ಜಗದೀಶ್ ಶೆಟ್ಟರ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ
ನಗರದಲ್ಲಿಂದು ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ. ಈ ಸಮಸ್ಯೆ ಆದಷ್ಟು ಬೇಗ ಬಗೆ ಬಗೆಹರಿಸುತ್ತೇವೆ ಎಂದರು.
ಹು-ಧಾ ಪೊಲೀಸ್ ಕಮಿಷನರ್ ಆರ್.ದಿಲೀಪ್ ವಿರುದ್ಧ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಕೃಷ್ಣಕಾಂತ ಅಸಮಾಧಾನ ಹೊರಹಾಕಿದ್ದಾರೆ. ಐಪಿಎಸ್ ಅಧಿಕಾರಿಯಾದ ನನಗೆ ಅವರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಡಿಜಿ ಮತ್ತು ಐಜಿಗೆ ಪತ್ರ ಬರೆದಿದ್ದರು.
Last Updated : Oct 6, 2020, 4:38 PM IST