ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಇದೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಡಿಸಿಎಂ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲ: ಚರ್ಚೆಗೆ 'ಶೆಟರ್' ಎಳೆದ ಕೈಗಾರಿಕಾ ಸಚಿವ - Industry Minister Jagdish Shettar
ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಏನೇ ನಿರ್ಧಾರವಿದ್ದರೂ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು. ಇದುವರೆಗೂ ಪಕ್ಷದ ವೇದಿಕೆಯಲ್ಲಿ ಅಂತ ಚರ್ಚೆಗಳು ನಡೆದಿಲ್ಲ ಎಂದು ಶೆಟ್ಟರ್ ಸ್ಪಷ್ಟ ಪಡಿಸಿದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಯಾರು ಕೇಳಿದ್ದಾರೆ ಎಂದು ಪ್ರಶ್ನಿಸಿದ ಅವರು, ಏನೇ ನಿರ್ಧಾರವಿದ್ದರೂ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು. ಇದುವರೆಗೂ ಪಕ್ಷದ ವೇದಿಕೆಯಲ್ಲಿ ಅಂತ ಚರ್ಚೆಗಳು ನಡೆದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.
ಪೌರತ್ವ ಕಾಯ್ದೆಗೆ ವಿರೋಧಿಸಿ ನಡೆಯುತ್ತಿರುವ ಹೋರಾಟದ ಕುರಿತು ಮಾತನಾಡಿದ ಅವರು, ಇದೆಲ್ಲ ಕಾಂಗ್ರೆಸ್ ಪ್ರೇರಿತ ಹೋರಾಟ. ಕಾಯ್ದೆ ಜಾರಿಗೆಯಾಗಬೇಕಾದರೆ ಸುಮ್ಮನಿದ್ದರು. ಈಗ ಜನರನ್ನು ಪ್ರಮೋಟ್ ಮಾಡಿ ಹೋರಾಟಕ್ಕಿಳಿಸುತ್ತಿದ್ದಾರೆ ಎಂದು ದೂರಿದರು.
Last Updated : Dec 17, 2019, 7:19 PM IST