ಹುಬ್ಬಳ್ಳಿ :ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಶಿರಗುಪ್ಪಿ ಹಾಗೂ ಹಳ್ಯಾಳ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಹಾಗೂ ಏಜೆಂಟರ್‌ಗಳು ಮತ ಎಣಿಕೆ ಬಹಿಷ್ಕರಿಸಿದ ಘಟನೆ ನಡೆದಿದೆ.
ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿರುವ ಮತ ಎಣಿಕೆ ಕೇಂದ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಹಾಗೂ ಶಿರಗುಪ್ಪಿ ಗ್ರಾಮ ಪಂಚಾಯತ್ ಮತ ಎಣಿಕೆ ನಡೆಯಿತ್ತಿದೆ. ಆದ್ರೆ, ಮತ ಎಣಿಕೆ ಕೇಂದ್ರದಲ್ಲಿ ಸಾಮಾಜಿಕ ಅಂತರ ಇಲ್ಲ, ಅಧಿಕಾರಿಗಳು ಬೇಕಾಬಿಟ್ಟಿ ವರ್ತನೆ ಮಾಡುತ್ತಿದ್ದಾರೆ.