ಕರ್ನಾಟಕ

karnataka

ETV Bharat / state

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಆಗ್ರಹ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ - ಹುಬ್ಬಳ್ಳಿ ಜಿಲ್ಲಾ ಸುದ್ದಿ

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Shivasena protest against state government
ಪ್ರತಿಭಟನೆ

By

Published : Jul 10, 2020, 2:00 PM IST

ಹುಬ್ಬಳ್ಳಿ:ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಮಿನಿವಿಧಾನಸೌಧದ ಎದುರು ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಹಶೀಲ್ದಾರ್​​ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ವೇತನವನ್ನು ಕೂಡಲೇ ಬಿಡುಗಡೆಗೊಳಿಸುವ ಮೂಲಕ ಅತಿಥಿ ಉಪನ್ಯಾಸಕರ ಹಿತಾಸಕ್ತಿ ಕಾಪಾಡಬೇಕು ಎಂದು ಶಿವಸೇನಾ ರಾಜ್ಯಾಧ್ಯಕ್ಷ ಕುಮಾರ ಹಕಾರಿ ಒತ್ತಾಯಿಸಿದರು.

ಪ್ರತಿಭಟನೆ ನಡೆಸಿದ ಶಿವಸೇನಾ ಕಾರ್ಯಕರ್ತರು

ರಾಜ್ಯದ 453 ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ 14,500ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಮಾರ್ಚ್​​​ನಿಂದ ಈವರೆಗೂ ಸಂಬಳವಾಗಿಲ್ಲ. ಎಷ್ಟೋ ಉಪನ್ಯಾಸಕರ ಸಂಸಾರ ಬೀದಿಗೆ ಬಂದಿವೆ. ಈಗಾಗಲೇ 8ಕ್ಕೂ ಹೆಚ್ಚು ಉಪನ್ಯಾಸಕರು ಈ ನೋವಿನೊಂದಿಗೆ ಆತ್ಮಹತ್ಯೆ ಅಥವಾ ಹೃದಯ ಸಂಬಂಧಿ ರೋಗಗಳಿಂದ ಮರಣ ಹೊಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕೆಲ್ಲ ಕಾರಣ ಸರ್ಕಾರ ವೇತನ ಬಿಡುಗಡೆ ಮಾಡದಿರುವುದು. ಕೂಡಲೇ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details