ಹುಬ್ಬಳ್ಳಿ:ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ನಗರದ ಜನನಿಬಿಡ ಪ್ರದೇಶದಲ್ಲಿ ಆಂಟಿಜನ್ ಟೆಸ್ಟ್ ನಡೆಸುತ್ತಿದೆ.
ಹುಬ್ಬಳ್ಳಿಯ ದುರ್ಗದ ಬೈಲ್ ಸೇರಿದಂತೆ ಅವಳಿನಗರದ 15 ಕಡೆಗಳಲ್ಲಿ ಇಂದಿನಿಂದ ರ‍್ಯಾಪಿಡ್ ಟೆಸ್ಟ್ ನಡೆಸಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹುಬ್ಬಳ್ಳಿಯ ದುರ್ಗದ ಬೈಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದುರ್ಗದಬೈಲ್ನಲ್ಲಿ 60ಕ್ಕೂ ಹೆಚ್ಚು ಜನರ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ 6 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿ ಸೋಂಕು ಕಾಣಿಸಿಕೊಂಡವರ ಅಂಗಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.