ಹುಬ್ಬಳ್ಳಿ:ಹುಬ್ಬಳ್ಳಿ ಈದ್ಗಾ ಮೈದಾನ ಮತ್ತೆ ಮುನ್ನೆಲೆಗೆ ಬಂದಿದೆ. ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಈ ಹಿಂದೆ ಮಹಾನಗರ ಪಾಲಿಕೆ ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಹಲವು ಸಂಘಟನೆಗಳು ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿವೆ.
ಕನಕದಾಸ ಜಯಂತಿ ಆಚರಣೆಗೆ ಈದ್ಗಾ ಮೈದಾನದಲ್ಲಿ ಅನುಮತಿ ನೀಡಬೇಕು ಎಂದು ಶ್ರೀರಾಮ ಸೇನಾ ಸಂಘಟಕರು ಕೂಡ
ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರಿಗೆ ಮನವಿ ನೀಡಿದ್ದಾರೆ. ಇದೇ ನ. 11 ರಂದು ಕನಕದಾಸ ಜಯಂತಿ ಆಚರಣೆಗೆ ಮನವಿ ಮಾಡಲಾಗಿದೆ . ಟಿಪ್ಪು ಜಯಂತಿಗೆ ಅವಕಾಶ ನೀಡಬೇಕು ಎಂದು ಎಐಎಂಐಎಂ ಪಕ್ಷದ ನಾಯಕರು ಮನವಿ ಮಾಡಿದ್ದರ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ ಮಾಡಲಾಗಿದೆ.