ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ನೂತನ ಕೈಗಾರಿಕಾ ನೀತಿ, ಹೂಡಿಕೆ ಅವಕಾಶ ಜಾಗೃತಿ ಸಮಾವೇಶಕ್ಕೆ ಶೆಟ್ಟರ್ ಚಾಲನೆ - Industrial Policy and Investment Opportunities
ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ವಿನಂತಿಸಿಕೊಂಡರು.
ನಗರದ ಖಾಸಗಿ ಹೊಟೇಲ್ವೊಂದರಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕೋದ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸುವ ಸದುದ್ದೇಶದಿಂದ ಹೊಸ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳನ್ನು ನೀಡಲಾಗುತ್ತಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕದಂತಹ ಸಮಾವೇಶಗಳನ್ನು ಮಾಡುವ ಮೂಲಕ ಕೈಗಾರಿಕಾ ಸ್ಥಾಪನೆಗೆ ಹೊಸ ಅಧ್ಯಾಯವನ್ನು ಬರೆಯಲಾಗಿದೆ ಎಂದರು.
ಹಲವಾರು ಕೈಗಾರಿಕೆಗಳು ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿಯಾಗಿದೆ. ಅಲ್ಲದೇ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ವಿನಂತಿಸಿಕೊಂಡರು.