ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ಪುನಾರಂಭವಾಗಿರುವ ವಿವಿಧ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು.
ಧಾರವಾಡ ಶಾಲೆಗಳಿಗೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಭೇಟಿ - dharwad education news
ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಶಾಲೆಗಳಿಗೆ ಭೇಟಿ ನೀಡಿ ಕೋವಿಡ್ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.
ಶಾಲೆಗಳಿಗೆ ಭೇಟಿ ನೀಡಿದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ
ಧಾರವಾಡದ ಆರ್ಎಲ್ಎಸ್ ಪ್ರೌಢಶಾಲೆ, ಮುಮ್ಮಿಗಟ್ಟಿ ಸರ್ಕಾರಿ ಪ್ರೌಢಶಾಲೆ ಮತ್ತು ಕೋಟೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ, ಕೋವಿಡ್ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಪರ ಆಯುಕ್ತರ ಕಚೇರಿ ನಿರ್ದೇಶಕಿ ಮಮತಾ ನಾಯಕ, ಸಹನಿರ್ದೇಶಕ ಎಂಎಫ್ ಕುಂದಗೋಳ, ಉಪನಿರ್ದೇಶಕ ಎಂಎಲ್ ಹಂಚಾಟೆ ಉಪಸ್ಥಿತರಿದ್ದರು.