ಹುಬ್ಬಳ್ಳಿ: ಬಾದಾಮಿ ಪ್ರವಾಸದಿಂದ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್ನಲ್ಲಿ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಕಾಲ ಕಳೆಯುತ್ತಿದ್ದಾರೆ.
ರಿಲ್ಯಾಕ್ಸ್ ಮೂಡ್ನಲ್ಲಿ ಸಿದ್ದರಾಮಯ್ಯ: ಐಪಿಎಲ್ ಪಂದ್ಯ ವೀಕ್ಷಣೆ - Siddaramaiah latest news
ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್ನಲ್ಲಿ ಖಾಸಗಿ ಹೋಟೆಲ್ನಲ್ಲಿ ಕಾಲ ಕಳೆಯುತ್ತಿದ್ದಾರೆ.

Siddaramaiah
ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಅವರು, ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಹೋಟೆಲ್ನಲ್ಲಿ ಐಪಿಎಲ್ ಮ್ಯಾಚ್ ವೀಕ್ಷಿಸಿ ರಿಲ್ಯಾಕ್ಸ್ ಆಗಿದ್ದಾರೆ.
ಕಿಂಗ್ಸ್ ಎಲೆವೆನ್ ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯನವರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.