ಹುಬ್ಬಳ್ಳಿ: ಬಿಜೆಪಿ ಆಡಳಿತದಿಂದ ಜನ ಭ್ರಮನಿರಸರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಹಾಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯಿಂದಾಗಿ ಜನ ಬೇಸತ್ತು ಹೋಗಿದ್ದಾರೆ. ಜನ ಬದಲಾವಣೆ ಬಯಸಿ ಕಾಂಗ್ರೆಸ್ ಪರವಾಗಿದ್ದಾರೆ. ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ದಾಳಿ ಬಗ್ಗೆ ಯಡಿಯೂರಪ್ಪ ಅವರನ್ನೇ ಕೇಳಬೇಕು. ಅವರ ಆಪ್ತನ ಮೇಲೆ ದಾಳಿಯಾಗಿದೆ ಅಂದ್ರೆ ಏನೋ ರಾಜಕೀಯ ಇರಬೇಕು. ಈಗ ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರನ್ನು ಬಿಟ್ಟು ಬೊಮ್ಮಾಯಿ ಮನೆ ಮೇಲೆ, ಸಚಿವರ ಮನೆ ಮೇಲೆ ದಾಳಿ ಮಾಡೋಕಾಗುತ್ತಾ, ಬಿಜೆಪಿಯವರು ಚೌಕಿದಾರರಲ್ಲ, ಅವರು ಲೂಟರ್ಸ್ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ: ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ: ಬಿಎಸ್ವೈ, ಬಿವೈ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ