ಹುಬ್ಬಳ್ಳಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿಂದು ಕಾಂಗ್ರೆಸ್ ನಾಯಕನ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದರು.
ಮುಖ್ಯಮಂತ್ರಿಗಳು ಇಡಿಗೆ ರೆಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಹಾಗಿದ್ದರೆ ಇಷ್ಟು ದಿನ ಯಾಕೆ ಮುಚ್ಚಿಟ್ಟಿದ್ದರು.? ಇಷ್ಟು ದೊಡ್ಡ ಪ್ರಕರಣವನ್ನು ಮುಚ್ಚಿಟ್ಟಂತೆ ಆಯ್ತಲ್ಲ? ಕೇಂದ್ರ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.