ಕರ್ನಾಟಕ

karnataka

ETV Bharat / state

ಸಿಎಂ, ಸಚಿವರಿಗೆ ಮೇಕೆದಾಟು ಪಾದಯಾತ್ರೆಯಿಂದ ಕೋವಿಡ್ ಬಂತಾ?: ಸಿದ್ದರಾಮಯ್ಯ ಲೇವಡಿ

ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ, ಕಲ್ಯಾಣ ಕರ್ನಾಟಕದ 371 ಜೆ ಪರವಾಗಿ ಹೋರಾಟ ನಡೆಸುತ್ತೇವೆ‌. ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Jan 24, 2022, 2:25 PM IST

ಹುಬ್ಬಳ್ಳಿ: ಮೇಕೆದಾಟು ಪಾದಯಾತ್ರೆ ಹತ್ತಿಕ್ಕಲು ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಯಿತು. ಕಾಂಗ್ರೆಸ್ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ, ಆರ್.ಅಶೋಕ್​, ಸೋಮಶೇಖರ್‌ಗೆ ಕೋವಿಡ್ ದೃಢಪಟ್ಟಿರುವುದು ನಮ್ಮ ಪಾದಯಾತ್ರೆಯಿಂದನಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ, ಕಲ್ಯಾಣ ಕರ್ನಾಟಕದ 371ಜೆ ಪರವಾಗಿ ಹೋರಾಟ ನಡೆಸುತ್ತೇವೆ‌. ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ. ನಮ್ಮ ಅಧಿಕಾರದ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಹೋರಾಟ ಮಾಡಿದ್ದರು.

ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹದಾಯಿ ಕಾಮಗಾರಿ ಜಾರಿಗೆ ತರುತ್ತೇವೆ‌, ರಕ್ತದಲ್ಲಿ ಬರೆದು ಕೊಡುತ್ತೇನೆಂದು ಯಡಿಯೂರಪ್ಪ ಮಾತು ಕೊಟ್ಟಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಬಂತಾ? ಎಂದು ಪ್ರಶ್ನಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಜನರು ಈಗಾಗಲೇ ತತ್ತರಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಬೇಜವಾಬ್ದಾರಿ ನಿರ್ಧಾರದಿಂದ ಜನರು ಬೇಸತ್ತಿದ್ದು, ಬಿಜೆಪಿಯನ್ನು ಕೈ ಬಿಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.

ABOUT THE AUTHOR

...view details