ಹುಬ್ಬಳ್ಳಿ : ಕೇಂದ್ರ ಸರ್ಕಾರ ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಮಾಡಬಾರದು. ಬಿಜೆಪಿಯವರ ಹರ್ ಘರ್ ತಿರಂಗಾ ಅಭಿಯಾನ ಡೋಂಗಿ ರಾಜಕೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತಾನಾಡಿದ ಅವರು, ನಾನು ಡೋಂಗಿ ರಾಜಕೀಯ ಮಾಡಬಾರದು ಎಂದು ಹೇಳಿದ್ದೇನೆ. ಹಿಂದೆ ಆರ್ ಎಸ್ಎಸ್ ಗೋಳ್ವಲ್ಕರ್ ಮತ್ತು ಸಾವರ್ಕರ್ ರಾಷ್ಟ್ರಧ್ವಜ ಬೇಡ ಅಂದಿದ್ದರು. ಅವರು ನಮ್ಮ ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ವಿರೋಧ ಮಾಡಿದ್ದರು. ಆರ್ಎಸ್ಎಸ್ ನವರು ನಾಗರಪುರದ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸ್ತಾರಾ ಎಂದು ಪ್ರಶ್ನಿಸಿದರು.
ಬಿಹಾರದಲ್ಲಿನ ರಾಜಕೀಯ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಿತೀಶ್ ಕುಮಾರ್ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ಇವಾಗ ಎನ್ ಡಿಎ ತೊರೆದಿದ್ದಾರೆ. ಅವರುಗಳ ಮನಸ್ತಾಪದ ಬಗ್ಗೆ ನನಗೆ ಗೊತ್ತಿಲ್ಲ. ಅವರೊಬ್ಬ ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದವರು. ಕೋಮುವಾದ ಪಕ್ಷ ಬಿಟ್ಟಿದ್ದು ಒಳ್ಳೆಯದು ಎಂದು ಹೇಳಿದರು.