ಧಾರವಾಡ: ಆರನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು.
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮೌನ ಪ್ರತಿಭಟನೆ ನಡೆಸಿದ ಸಾರಿಗೆ ಸಿಬ್ಬಂದಿ
6ನೇ ವೇತನ ಆಯೋಗದ ಅನುಷ್ಠಾನಕ್ಕೆ ಒತ್ತಾಯಿಸಿ ಧಾರವಾಡದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಇಂದು ಮೌನ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಾರಿಗೆ ನೌಕರರು ಕೆಲವೊತ್ತು ಪ್ರತಿಭಟಿಸಿದರು. ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಕೆಎಸ್ಆರ್ಟಿಸಿಯ ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕೆಲಸದಿಂದ ಅಮಾನತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈಗಾಗಲೇ ಪೊಲೀಸರು ಕೂಡ ನೀವು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದ್ದು, ಪ್ರತಿಭಟನೆ ಹಿಂಪಡೆಯಬೇಕು ಇಲ್ಲದೇ ಹೋದರೆ ನಿಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಳಿಕ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಪಿ.ಎಚ್. ನೀರಲಕೇರಿ ಹಾಗೂ ಸಾರಿಗೆ ನೌಕರರು ಪ್ರತಿಭಟನಾ ಸ್ಥಳದಲ್ಲಿ ಮಲಗಿಕೊಂಡು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಮನವಿ ನೀಡಿ ಪ್ರತಿಭಟನೆ ಹಿಂಪಡೆದರು. ಬಳಿಕ ಸಾರಿಗೆ ನೌಕರರನ್ನು ಚದುರಿಸಲಾಯಿತು.