ಧಾರವಾಡ: 74 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು.
ಧಾರವಾಡದಲ್ಲಿ ಸರಳ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಶೆಟ್ಟರ್ - ಧಾರವಾಡದಲ್ಲಿ ಸರಳ ಸ್ವಾತಂತ್ರ್ಗೋತ್ಸವ
ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಸಚಿವ ಜಗದೀಶ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು.
ಧಾರವಾಡದಲ್ಲಿ ಸರಳ ಸ್ವಾತಂತ್ರ್ಗೋತ್ಸವ..
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಬಾರಿ ಕೋವಿಡ್ ಭೀತಿ ಹಿನ್ನೆಲೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಿಷೇಧ ಹೇರಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ಸಚಿವ ಜಗದೀಶ್ ಶೆಟ್ಟರ್ ಪಥಸಂಚಲನ ತಂಡಗಳ ವೀಕ್ಷಣೆ ನಡೆಸಿ ಆಕಾಶಕ್ಕೆ ಬಲೂನ್ ಮತ್ತು ಪಾರಿವಾಳವನ್ನು ಹಾರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಕಮಿಷನರ್ ಆರ್. ದಿಲೀಪ್, ಎಸ್ಪಿ ವರ್ತಿಕಾ ಕಟಿಯಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.