ಹುಬ್ಬಳ್ಳಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇಟ್ಟಿದೆ. ಹುಬ್ಬಳ್ಳಿ ಮತ್ತು ಧಾರವಾಡ ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಠಾತ್ ದಾಳಿ ನಡೆಸಿ 44 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಿದೆ.
ದುರ್ಗದ ಬೈಲ್, ಶಾ ಬಜಾರ್, ಮೂರು ಸಾವಿರ ಮಠದ ಪ್ರದೇಶ ಹಾಗೂ ಧಾರವಾಡದ ನೆಹರೂ ಮಾರ್ಕೇಟ್, ಸಿಬಿಟಿ, ಸೂಪರ್ ಮಾರ್ಕೇಟ್ ಸೇರಿದಂತೆ ವಿವಿಧ ಕಡೆ ನಡೆದ ದಾಳಿಯಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸ್ವಂತ ಉದ್ಯೋಗ ಹಾಗೂ ಪಾಲಕರಿಗೆ ಸಹಾಯ ಮಾಡುತ್ತಿದ್ದ ಮಕ್ಕಳನ್ನು ರಕ್ಷಿಸಿ ಪಾಲಕರಿಗೆ ಕಾನೂನಾತ್ಮಕ ತಿಳುವಳಿಕೆ ಮೂಡಿಸಿ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು.