ಧಾರವಾಡ:ನಗರದಲ್ಲಿ ಬೆಳಕಿಗೆ ಬಂದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಈ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಧಾರವಾಡದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯಾಗಿರುವ ಬಾಲಕಿಯನ್ನು ಹೊರವಲಯಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದೆ.