ಹುಬ್ಬಳ್ಳಿ: ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪ್ರತಿ ದಿನ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಜಾಗೃತಿ ಮೂಡಿಸುತ್ತಿದೆ. ಆದರೆ ಇದು ಹುಬ್ಬಳ್ಳಿ ಮಂದಿಗೆ ಅರ್ಥವಾಗುತ್ತಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.
ಹುಬ್ಬಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಅಂತರ ಕಾಯ್ದುಕೊಳ್ಳುವಲ್ಲಿ ಜನರ ನಿರ್ಲಕ್ಷ್ಯ - ಅಂತರ ಕಾಯ್ದುಕೊಳ್ಳುವಲ್ಲಿ ನಿರ್ಲಕ್ಷ್ಯ
ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡು ಬಂದಿದೆ. ಹುಬ್ಬಳ್ಳಿ ರೈಲ್ವೇ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನ ಜನರು ಮರೆತ್ತಿದ್ದಾರೆ.
ಜನರ ನಿರ್ಲಕ್ಷ್ಯ
ನಗರದ ರೈಲ್ವೇ ನಿಲ್ದಾಣದ ಬಳಿ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಜನರು ಮರೆತ್ತಿದ್ದಾರೆ.
ನೂರಕ್ಕೂ ಹೆಚ್ಚು ಜನರು ಜಯಂತಿ ಆಚರಣೆ ವೇಳೆ ಭಾಗಯಾಗಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಶಾಸಕ ಸೂಚನೆ ನೀಡಿದರೂ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಅನಾಗರಿಕರಾಗಿ ವರ್ತಿಸಿದರು.