ಧಾರವಾಡ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ತಿಕಾ ಕಟಿಯಾರ್ ಅವರು ಗುರುವಾರ ಮತ್ತೆ ಅಧಿಕಾರ ವಹಿಸಿಕೊಂಡರು.
ವೆಲ್‌ಕಮ್‌ಬ್ಯಾಕ್ ಮೇಡಂ.. ಮತ್ತೆ ಧಾರವಾಡ ಎಸ್‌ಪಿಯಾಗಿ ವರ್ತಿಕಾ ಕಟಿಯಾರ್ ಅಧಿಕಾರ ಸ್ವೀಕಾರ.. - ಎಸ್ಪಿ ವರ್ತಿಕಾ ಕಟಿಯಾರ್ ವರ್ಗಾವಣೆ
ರಾಜ್ಯ ಸರ್ಕಾರ ವರ್ಗಾವಣೆಯನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಧಾರವಾಡ ಜಿಲ್ಲಾ ಎಸ್ಪಿ ವರ್ತಿಕಾ ಕಟಿಯಾರ್ ಗುರುವಾರ ಮತ್ತೆ ಅಧಿಕಾರ ವಹಿಸಿಕೊಂಡರು.
ಸೆ. 10 ರಂದು ಜಿಲ್ಲೆಗೆ ನೂತನ ಎಸ್ಪಿಯಾಗಿ ಆಗಮಿಸಿದ್ದ ವರ್ತಿಕಾ ಕಟಿಯಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಬಳಿಕ ಐಪಿಎಸ್ ಅಧಿಕಾರಿ ಡೆಕ್ಕಾ ಕಿಶೋರ ಬಾಬು ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ವರ್ತಿಕಾ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಹಿನ್ನೆಲೆ ವರ್ತಿಕಾ ಅವರನ್ನು 2020ರ ಮಾರ್ಚ್‌ವರೆಗೆ ವರ್ಗಾವಣೆ ಮಾಡಬಾರದು ಎಂದು ಸಿಎಟಿ ಆದೇಶ ಹೊರಡಿಸಿತ್ತು. ಹೀಗಾಗಿ ಕಿಶೋರ ಬಾಬು ಗುರುವಾರ ಹಿರಿಯ ಅಧಿಕಾರಿಯೊಬ್ಬರಿಗೆ ಅಧಿಕಾರ ಹಸ್ತಾಂತರ ಮಾಡಿ ತೆರಳಿದ್ದರು ಎಂದು ತಿಳಿದು ಬಂದಿದೆ.