ಹುಬ್ಬಳ್ಳಿ:ಲಾಕ್ಡೌನ್ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಅದರಂತೆ ಇಂದು ಹುಬ್ಬಳ್ಳಿಯಿಂದ ಉತ್ತರ ಪ್ರದೇಶಕ್ಕೆ ರೈಲು ಸಂಚಾರ ನಡೆಸಲಿದೆ.
ಉತ್ತರ ಪ್ರದೇಶಕ್ಕೆ ವಿಶೇಷ ರೈಲು: ವಲಸಿಗರಿಗೆ ಸ್ಕ್ರೀನಿಂಗ್ ಟೆಸ್ಟ್ - Migrant workers
ಹುಬ್ಬಳ್ಳಿಯಿಂದ ಉತ್ತರ ಪ್ರದೇಶಕ್ಕೆ ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಿಗಳು, ವಿದ್ಯಾರ್ಥಿಗಳು ಹಾಗೂ ಇತರ ಜನರಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ವಲಸಿಗರಿಗೆ ಸ್ಕ್ರೀನಿಂಗ್ ಟೆಸ್ಟ್
ಈ ಶ್ರಮಿಕ ಎಕ್ಸ್ಪ್ರೆಸ್ ವಿಶೇಷ ರೈಲು ಲಖನೌ ಮಾರ್ಗವಾಗಿ ಬಸ್ತಿ ಹಾಗೂ ಅಜಮ್‍ಘಡಕ್ಕೆ ತೆರಳಲಿದ್ದು, ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯದ ವಿಭಾಗೀಯ ಕಚೇರಿಯು ಉತ್ತರ ಪ್ರದೇಶ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಿಗಳು, ವಿದ್ಯಾರ್ಥಿಗಳು ಹಾಗೂ ಇತರ ಜನರಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದ್ದು, ನಾಳೆ ಕೂಡಾ ವಿಶೇಷ ರೈಲು ಸಂಚಾರ ಮಾಡಲಿದೆ.
ಇನ್ನು ರೈಲುಗಳ ಮೂಲಕ ತೆರಳಲು ಪ್ರಯಾಣಿಕರನ್ನು ರೈಲ್ವೆ ನಿಲ್ದಾಣದ ಆವರಣದಲ್ಲಿ ಮೊದಲು ಸ್ಕ್ರೀನಿಂಗ್ ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಯಿತು.