ಕರ್ನಾಟಕ

karnataka

ETV Bharat / state

ದೀಪಾವಳಿ: ನಾಗರಕೋಯಿಲ್ - ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿಂದ ನಿಯಂತ್ರಿಸಲು ತಮಿಳುನಾಡಿನ ನಾಗರಕೋಯಿಲ್​ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ರೈಲು ನಿಲ್ದಾಣಗಳ ನಡುವೆ ಮೂರು ಟ್ರಿಪ್​ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ.

ವಿಶೇಷ ರೈಲುಗಳ ಸಂಚಾರ
ವಿಶೇಷ ರೈಲುಗಳು

By ETV Bharat Karnataka Team

Published : Nov 7, 2023, 9:24 PM IST

ಹುಬ್ಬಳ್ಳಿ:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ತಮಿಳುನಾಡಿನ ನಾಗರಕೋಯಿಲ್​ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಮೂರು ಟ್ರಿಪ್​ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯವು ನಿರ್ಧರಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ

ರೈಲು ಸಂಖ್ಯೆ 06083/06084 ನಾಗರಕೋಯಿಲ್ - ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ನಾಗರಕೋಯಿಲ್ ವಿಶೇಷ ಎಕ್ಸ್ ಪ್ರೆಸ್ (3 ಟ್ರಿಪ್):ರೈಲು ಸಂಖ್ಯೆ 06083 ನಾಗರಕೋಯಿಲ್- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 7, 14 ಮತ್ತು 21 ರಂದು (ಮಂಗಳವಾರ) 19.35 ಗಂಟೆಗೆ ನಾಗರಕೋಯಿಲ್ ನಿಲ್ದಾಣದಿಂದ ಹೊರಟು ಮರುದಿನ (ಬುಧವಾರ) 12.40 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಹಿಂತಿರುಗುವ ದಿಕ್ಕಿನಲ್ಲಿ ರೈಲು ಸಂಖ್ಯೆ 06084 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು - ನಾಗರಕೋಯಿಲ್ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 8, 15 ಮತ್ತು 22 ರಂದು (ಬುಧವಾರ) 14:00 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು ಮರುದಿನ (ಗುರುವಾರ) 06.10 ಗಂಟೆಗೆ ನಾಗರಕೋಯಿಲ್ ನಿಲ್ದಾಣ ತಲುಪಲಿದೆ.

ಈ ವಿಶೇಷ ರೈಲುಗಳು ವಲ್ಲಿಯೂರ್, ತಿರುನೆಲ್ವೇಲಿ, ಕೋವಿಲ್ಪಟ್ಟಿ, ಸತೂರ್, ವಿರುಧುನಗರ, ಮಧುರೈ, ದಿಂಡಿಗಲ್, ತಿರುಚ್ಚಿರಾಪಳ್ಳಿ, ಕರೂರ್, ನಮಕ್ಕಲ್, ಸೇಲಂ, ಮೊರಪ್ಪೂರ್, ತಿರುಪತ್ತೂರು, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.

ಈ ವಿಶೇಷ ರೈಲುಗಳಲ್ಲಿ 1 ಎಸಿ ಟು ಟೈಯರ್ ಬೋಗಿ, 3 ಎಸಿ ತ್ರಿ ಟೈಯರ್ ಬೋಗಿಗಳು, 10 ಸ್ಲೀಪರ್ ಕ್ಲಾಸ್ ಬೋಗಿಗಳು, 2 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು 2 ಲಗೇಜ್ ಕಮ್ ಬ್ರೇಕ್ ವ್ಯಾನ್ ಬೋಗಿಗಳು ಒಳಗೊಂಡಿರುತ್ತವೆ.

ಭಗತ್ ಕಿ ಕೋಠಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ: ಪೂಜಾ / ದೀಪಾವಳಿ / ಛತ್ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಭಗತ್ ಕಿ ಕೋಠಿ ನಿಲ್ದಾಣಗಳ ನಡುವೆ ಎಂಟು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ವಾಯುವ್ಯ ರೈಲ್ವೆ ವಲಯವು ನಿರ್ಧರಿಸಿದೆ.

ರೈಲು ಸಂಖ್ಯೆ 04813/04814 ಭಗತ್ ಕಿ ಕೋಠಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಭಗತ್ ಕಿ ಕೋಠಿ ವಿಶೇಷ ಎಕ್ಸ್ ಪ್ರೆಸ್ (8 ಟ್ರಿಪ್):ರೈಲು ಸಂಖ್ಯೆ 04813 ಭಗತ್ ಕಿ ಕೋಠಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 11 ರಿಂದ ಡಿಸೆಂಬರ್ 4 ರವರೆಗೆ ಪ್ರತಿ ಶನಿವಾರ ಮತ್ತು ಸೋಮವಾರ 05:15 ಗಂಟೆಗೆ ಭಗತ್ ಕಿ ಕೋಠಿ ನಿಲ್ದಾಣದಿಂದ ಹೊರಟು ಮರುದಿನ 11.30 ಕ್ಕೆ ಎಸ್.ಎಂ.ವಿ.ಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ರೈಲು ಸಂಖ್ಯೆ 04814 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಭಗತ್ ಕಿ ಕೋಠಿ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 13 ರಿಂದ ಡಿಸೆಂಬರ್ 6 ರವರೆಗೆ ಪ್ರತಿ ಸೋಮವಾರ ಮತ್ತು ಬುಧವಾರ 16:30 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮೂರನೇ ದಿನ 12:40 ಗಂಟೆಗೆ ತನ್ನ ಗಮ್ಯಸ್ಥಾನವಾದ ಭಗತ್ ಕಿ ಕೋಠಿ ನಿಲ್ದಾಣವನ್ನು ತಲುಪಲಿದೆ.

ಈ ವಿಶೇಷ ರೈಲುಗಳು ಲೂನಿ, ಸಂದಾರಿ, ಜಾಲೋರ್, ಮಾರ್ವಾರ್ ಭಿನ್ಮಾಲ್, ರಾಣಿವಾರ, ಧನೇರಾ, ಭಿಲ್ಡಿ ಜಂಕ್ಷನ್, ಪಟಾನ್, ಮಹೇಸನಾ ಜಂಕ್ಷನ್, ಅಹಮದಾಬಾದ್ ಜಂಕ್ಷನ್, ವಡೋದರಾ ಜಂಕ್ಷನ್, ಸೂರತ್, ವಾಪಿ, ವಸಾಯಿ ರೋಡ್, ಕಲ್ಯಾಣ್ ಜಂಕ್ಷನ್, ಪುಣೆ ಜಂಕ್ಷನ್, ಸತಾರಾ, ಮಿರಜ್ ಜಂಕ್ಷನ್, ಘಟಪ್ರಭಾ, ಬೆಳಗಾವಿ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ರಾಣಿಬೆನ್ನೂರ್, ದಾವಣಗೆರೆ, ಬೀರೂರ್, ಅರಸೀಕೆರೆ ಮತ್ತು ತಮಕೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.

ಈ ವಿಶೇಷ ರೈಲುಗಳಲ್ಲಿ 2 ಎಸಿ ಟು ಟೈಯರ್ ಬೋಗಿಗಳು, 5 ಎಸಿ ತ್ರಿ ಟೈಯರ್ ಬೋಗಿಗಳು, 7 ಸ್ಲೀಪರ್ ಕ್ಲಾಸ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ / ಅಂಗವಿಕಲ ಸ್ನೇಹಿ ಬೋಗಿಗಳು ಒಳಗೊಂಡಿರುತ್ತವೆ. ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ತಮ್ಮ ಹತ್ತಿರದ ರೈಲ್ವೆ ನಿಲ್ದಾಣಗಳನ್ನು ಸಂಪರ್ಕಿಸಿ ಅಥವಾ ಅಧಿಕೃತ ಜಾಲತಾಣ https://enquiry.indianrail.gov.in ಭೇಟಿ ನೀಡಿ ಅಥವಾ 139 ಸಹಾಯವಾಣಿಗೆ ಡಯಲ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ದೀಪಾವಳಿ ಸ್ಪೆಷಲ್: ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು; ಹೀಗಿದೆ ವೇಳಾಪಟ್ಟಿ

ABOUT THE AUTHOR

...view details