ಹುಬ್ಬಳ್ಳಿ:ಕೋವಿಡ್-19 ಸೋಂಕು ತಡೆಗೆ ಶ್ರವ್ಯ - ದೃಶ್ಯ ಮಾಧ್ಯಮದ ಮೂಲಕ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ವಿಶೇಷ ಪ್ರಚಾರ ವಾಹನಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ಹುಬ್ಬಳ್ಳಿ: ಕೋವಿಡ್ ಕುರಿತ ಜನ ಜಾಗೃತಿ ವಾಹನಗಳಿಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ - hubli shetter news
ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಿರುವ ವಿಶೇಷ ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
![ಹುಬ್ಬಳ್ಳಿ: ಕೋವಿಡ್ ಕುರಿತ ಜನ ಜಾಗೃತಿ ವಾಹನಗಳಿಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ ಕೋವಿಡ್ ಕುರಿತು ಜನ ಜಾಗೃತಿಗಾಗಿ ವಿಶೇಷ ವಾಹನಗಳು](https://etvbharatimages.akamaized.net/etvbharat/prod-images/768-512-9570462-773-9570462-1605612315868.jpg)
ಹುಬ್ಬಳ್ಳಿಯ ಮಧುರಾ ಕಾಲೋನಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ, ಎಲ್.ಇ.ಡಿ. ಮೊಬೈಲ್ ವಾಹನಗಳಿಗೆ ಸಚಿವರು ಹಸಿರು ನಿಶಾನೆ ತೋರಿಸಿದರು. ನಂತರ ಮಾತನಾಡಿ, ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು, ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು ಸರ್ಕಾರ ವಿಶೇಷ ಪ್ರಚಾರ ಕಾರ್ಯ ಕೈಗೊಂಡಿದೆ.
ಜಿಲ್ಲೆಯ 180 ಹಳ್ಳಿಗಳಲ್ಲಿ ಆಧುನಿಕ ತಂತ್ರಜ್ಞಾನದ ಬೃಹತ್ ಎಲ್‍ಇಡಿ ಪರದೆ ಹೊಂದಿರುವ ಎರಡು ವಾಹನಗಳು ಸಂಚರಿಸಲಿವೆ. ನಿತ್ಯ ಒಂದು ವಾಹನ 5 ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸುವುದು. ಕೊವೀಡ್-19 ಕುರಿತು ಸಾರ್ವಜನಿಕರು ನಿರ್ಲಕ್ಷ್ಯ ಮನೋಭಾವ ತಾಳದೇ ಎಚ್ಚರಿಕೆಯಿಂದರಬೇಕು ಎಂದರು.