ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಮಮಂದಿರ ಶಿಲಾನ್ಯಾಸ: ಶ್ರೀರಾಮಸೇನೆಯಿಂದ ವಿಶೇಷ ಪೂಜೆ - Ram Mandir Bhumi Pujan news
ಶ್ರೀರಾಮಮಂದಿರಕ್ಕೆ ಶಿಲಾನ್ಯಾಸ ಹಿನ್ನೆಲೆ ಶ್ರೀರಾಮಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀರಾಮಸೇನೆಯಿಂದ ವಿಶೇಷ ಪೂಜೆ
ಮುತಾಲಿಕ್ ಅವರ ನಿವಾಸದಲ್ಲಿ ವಿಶೇಷ ಪೂಜೆ, ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು. ಪರಸ್ಪರ ಸಿಹಿ ಹಂಚಿ ಶ್ರೀರಾಮಸೇನಾ ಕಾರ್ಯಕರ್ತರು ಸಂಭ್ರಮಿಸಿದರು.
ಅಲ್ಲದೇ, ನುಗ್ಗಿಕೇರಿ ಹನುಮಂತ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸಹ ಪೂಜೆ ಸಲ್ಲಿಸಲಾಗಿದ್ದು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.