ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ದೇಶದಾದ್ಯಂತ ವಿಸ್ತರಿಸಲು ಸಂಸತ್ತಿನಲ್ಲಿ ಬಿಲ್ ಪಾಸ್ ಮಾಡಿದ್ದು ಖಂಡನೀಯ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯು ಮಹಾತ್ಮಾ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರೋಧಿಯಾಗಿದೆ. ಆದರೆ ಇದನ್ನು ಬಿಜೆಪಿ ಹಾಗೂ ಸಂಘ ಪರಿವಾರ ತಿದ್ದುಪಡಿ ಮಾಡಿ ಕಾಯ್ದೆ ಜಾರಿಗೆ ತರುವ ಮೂಲಕ ಸಂವಿಧಾನಕ್ಕೆ ಕೊಡಲಿ ಪೆಟ್ಟು ಕೊಟ್ಟಿದ್ದಾರೆ ಎಂದು ದೂರಿದರು. ಇನ್ನು ಈ ಕಾಯ್ದೆಯು ಜನರು ಮಾನವೀಯ ಮೌಲ್ಯ, ಸರ್ವ ಜನರು ಭಾತೃತ್ವದಲ್ಲಿ ಇರಬೇಕು ಎಂಬ ಅಶಯಗಳಿಗೆ ತಿಲಾಂಜಲಿ ಹಾಡುವ ಜೊತೆಗೆ ರಾಷ್ಟ್ರದಲ್ಲಿ ಆದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಹೊಸಕಿ ಹಾಕುವ ಪ್ರಯತ್ನ ಆಗಿದೆ. ಕೂಡಲೇ ರಾಷ್ಟ್ರದ ಎಲ್ಲ ಜನರು ಕ್ವಿಟ್ ಇಂಡಿಯಾ ಚಳುವಳಿ ಹೋರಾಟದಂತೆ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ವಿರೋಧ ಮಾಡಬೇಕು ಎಂದರು.