ಧಾರವಾಡ:ಅಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯತ್ ಸದಸ್ಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿ.ಪಂ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್.ಪಾಟೀಲ್, ಪ್ರವಾಹದಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿತ್ತು. ಪ್ರಧಾನಿ ಮೋದಿ ಚಂದ್ರಯಾನ ವೀಕ್ಷಣೆಗೆ ಆಗಮಿಸಿದಾಗಲೂ ಏನಾಗಿದೆ ಅಂತಾ ಕೇಳಲಿಲ್ಲ, ಈ ಬಾರಿಯೂ ಏನೂ ಕೇಳಿಲ್ಲ. ರಾಜ್ಯದ ಸಿಎಂ ಅವರೇ ನಮ್ಮ ಮನವಿಗೆ ಸ್ಪಂದಿಸಿಲ್ಲ ಅಂತಾ ಹೇಳಿದ್ದಾರೆ. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ಇದೆಯಾ ಅನ್ನೋ ಕಲ್ಪನೆ ದೇಶದ ಪ್ರಧಾನಿ ಮೋದಿಯವರಿಗೆ ಇಲ್ಲವೆಂದು ಅನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಎಸ್.ಆರ್ ಪಾಟೀಲ್ ಭೇಟಿ ಮಕ್ಕಳು ದೇವರ ಸಮಾನ ಅವರಲ್ಲಿ ಕಲ್ಮಶ ಇರುವುದಿಲ್ಲ, ಅಂತಹ ಮಕ್ಕಳಿಗೆ ಬಗ್ಗೆ ಭಾವೈಕ್ಯತೆ ವಿಷಯ ಹೇಳಬೇಕು. ಅದರಲ್ಲಿಯೂ ಸಿದ್ದಗಂಗಾಮಠ ತ್ರಿವಿಧ ದಾಸೋಹದ ಮಠ ಅಲ್ಲಿ ಯಾವ ಜಾತಿ ಧರ್ಮ ಕೇಳುವುದಿಲ್ಲ, ಬಸವಾದಿ ಶರಣರ ಅನುಗುಣವಾಗಿ ನಡೆಯುವ ಮಠ ಅದಾಗಿದೆ. ಅಂತಹ ಮಠಕ್ಕೆ ಬಂದು ರಾಜಕೀಯ ಮಾತು ಆಡಬಾರದಿತ್ತು ಎಂದಿದ್ದಾರೆ.
ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಘೋಷಿಸಬಹುದು ಅಂತಾ ಜನ ಭಾವಿಸಿದ್ದರು. ಆದರ ಬದಲಾಗಿ ಅವರು ದ್ವೇಷ, ಅಸೂಯೆ ಮಾತು ಆಡಿದ್ದು ಸರಿಯಲ್ಲ, ಎಲ್ಲ ಖಾತೆಯನ್ನು ಸಿಎಂ ಒಬ್ಬರೇ ನಿಭಾಯಿಸಲು ಸಾಧ್ಯವಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ಸಂಪುಟ ವಿಸ್ತರಣೆ ಮಾಡಿದ ಬಳಿಕ ಈ ಸರ್ಕಾರದ ನಿಜ ಬಣ್ಣ ಬಯಲಾಗಲಿದೆ ಎಂದರು.
ಗೋವಾ ಮಹದಾಯಿ ನೀರು ಕಳವು ಮಾಡಿಕೊಂಡು ಹೋಗಿದೆ, ಕಳವು ಮಾಡಿದ್ದನ್ನು ಗೋವಾ ಸಿಎಂ ಒಪ್ಪಿಕೊಂಡಿದ್ದಾರೆ. ಈ ಭಾಗದಲ್ಲಿ ಇಬ್ಬರೂ ಕೇಂದ್ರ ಮಂತ್ರಿಗಳಿದ್ದಾರೆ. ಸುಮಲತಾ ಸೇರಿ 26 ಜನ ಸಂಸದರು ಬಿಜೆಪಿಯಿಂದ ಇದ್ದಾರೆ. ರಾಜ್ಯಕ್ಕೆ ಅನ್ಯಾಯವಾದಾಗ ಇವರು ಮಾತನಾಡುವುದಿಲ್ಲ. ಎಲ್ಲ ಕಡೆ ಬಿಜೆಪಿ ಸರ್ಕಾರವೇ ಇದ್ದಾಗ ಮಹದಾಯಿ ವಿಷಯದಲ್ಲಿ ಇವರು ವಿರೋಧ ಪಕ್ಷದ ರೀತಿ ಮಾತನಾಡುತ್ತಿದ್ದಾರೆ ಇದು ಶೇಮ್....ಶೇಮ್..ಎಂದು ದೂರಿದರು.