ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ನಿಮಿತ್ತ ಹಾಕಲಾಗಿದ್ದ ಬ್ಯಾನರ್ ಹರಿದು ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮರಾಠಾ ಶ್ರೀ ಭಾರತಿಮಠ ಸುಧಾರಣಾ ಸಮಿತಿ ಹಾಗೂ ಕ್ಷತ್ರಿಯ ಮಹಾಸಭಾದ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಕಲಘಟಗಿಯಲ್ಲಿ ಛತ್ರಪತಿ ಶಿವಾಜಿಗೆ ಅವಮಾನಿಸಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ - ಕ್ಷತ್ರಿಯ ಮಹಾಸಭಾ
ಕಲಘಟಗಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ನಿಮಿತ್ತವಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮರಾಠಾ ಶ್ರೀ ಭಾರತಿಮಠ ಸುಧಾರಣಾ ಸಮಿತಿ ಹಾಗೂ ಕ್ಷತ್ರಿಯ ಮಹಾಸಭಾ ಪ್ರತಿಭಟನೆ ನಡೆಸಿದೆ.
ಐತಿಹಾಸಿಕ ಹಿನ್ನೆಲೆಯುಳ್ಳ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಬ್ಯಾನರ್ ಹರಿದು ಹಾಗೂ ಕಾರ್ಯಕ್ರಮಕ್ಕೆ ಧಕ್ಕೆ ತರುವ ಮೂಲಕ ಶಿವಾಜಿ ಮಹಾರಾಜರಿಗೆ ಅವಮಾನಿಸಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ನಡೆದು ಸುಮಾರು ದಿನಗಳಾದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆರೋಪಿಸಿದರು. ಕೂಡಲೇ ಆರೋಪಿಗಳನ್ನು ಬಂಧಿಸುವ ಮೂಲಕ ನ್ಯಾಯ ಒದಗಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು. ಇದೇ ವೇಳೆ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.