ಧಾರವಾಡ: ಚಂದ್ರಶೇಖರ ಗುರೂಜಿ ನಿಧನ ಹಿನ್ನೆಲೆ ಅವರ ಅಂತ್ಯಸಂಸ್ಕಾರದ ಕಾರ್ಯ ಮುಗಿಸಿಕೊಂಡು ಶಿವಲಿಂಗೇಶ್ವರ ಸ್ವಾಮೀಜಿ ತಮ್ಮ ಕಾರಿನಲ್ಲಿ ವಾಪಸ್ ಆಗುವಾಗ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ: ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ - ಚಂದ್ರಶೇಖರ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಶಿ ಮಠದ ಸ್ವಾಮೀಜಿಗಳು ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
Sri Shivalingeshwar Swamijis car accident at dharwad
ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಶಿ ಮಠದ ಸ್ವಾಮೀಜಿಗಳು ನಿಡಸೋಶಿಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಯವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗರಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Last Updated : Jul 6, 2022, 10:36 PM IST