ಹುಬ್ಬಳ್ಳಿ :ಧಾರವಾಡದ ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾದ ಲಿಂ. ಶ್ರೀ ಶಿವಯೋಗಿ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ, ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅಂತಿಮ ನಮನ ಸಲ್ಲಿಸಿದರು.
ಲಿಂ. ಶ್ರೀ ಶಿವಯೋಗಿ ಶ್ರೀಗಳ ಅಂತಿಮ ದರ್ಶನ ಪಡೆದ ಶಾಸಕಿ ಕುಸುಮಾವತಿ ಶಿವಳ್ಳಿ - ಧಾರವಾಡದ ಮುರುಘಾಮಠ
ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾದ ಲಿಂ. ಶ್ರೀ ಶಿವಯೋಗಿ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ, ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅಂತಿಮ ನಮನ ಸಲ್ಲಿಸಿದರು.
ಲಿಂ. ಶ್ರೀ ಶಿವಯೋಗಿ ಶ್ರೀ
ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಮಹಾಂತಸ್ವಾಮಿ ಮಠದಲ್ಲಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಶ್ರೀಗಳ ಅಂತ್ಯಕ್ರಿಯೆ ಸಾಯಂಕಾಲ ಪಶುಪತಿಹಾಳದ ಮಹಾಂತಸ್ವಾಮಿ ಮಠದ ಆವರಣದಲ್ಲಿ ಜರುಗಲಿದೆ. ಶ್ರಿಗಳು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ನಿಧನ ಹೊಂದಿದ್ದರು.