ಕರ್ನಾಟಕ

karnataka

ETV Bharat / state

ಗಣೇಶೋತ್ಸವ ಆಚರಣೆಗೆ ನಿರ್ಬಂಧ : ಡಿಸಿ ಕಚೇರಿ ಎದುರು ಶ್ರೀರಾಮ ಸೇನೆ ಪ್ರತಿಭಟನೆ - ಧಾರವಾಡ ಗಣೇಶೋತ್ಸವ ಆಚರಣೆಗೆ ನಿರ್ಬಂಧ

ಕೊರೊನಾ ಮೂರನೇ ಅಲೆ ಹಿನ್ನೆಲೆ ಸರ್ಕಾರ ಈಗಾಗಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧಿಸಿದೆ. ಹೀಗಾಗಿ, ಮೂರ್ತಿ ತಯಾರಕರು, ಪೆಂಡಾಲ್, ಲೈಟಿಂಗ್ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಕೊರೊನಾ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತೇವೆ. ಹೀಗಾಗಿ, ಅವಕಾಶ ನೀಡಬೇಕು..

srirama-sena-protest-to-allow-ganeshotsav-celebration
ಶ್ರೀರಾಮ ಸೇನೆ ಪ್ರತಿಭಟನೆ

By

Published : Aug 21, 2021, 3:05 PM IST

ಧಾರವಾಡ :ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್​ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಗಣೇಶ ಮೂರ್ತಿ ಕೂರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಡಿಸಿ ಕಚೇರಿ ಎದುರು ಶ್ರೀರಾಮ ಸೇನೆ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಶ್ರೀರಾಮಸೇನಾ ಕಾರ್ಯಕರ್ತರು ಹಾಗೂ ಮೂರ್ತಿ ತಯಾರಕರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಡಿಸಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಕೊರೊನಾ ಮೂರನೇ ಅಲೆ ಹಿನ್ನೆಲೆ ಸರ್ಕಾರ ಈಗಾಗಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧಿಸಿದೆ. ಹೀಗಾಗಿ, ಮೂರ್ತಿ ತಯಾರಕರು, ಪೆಂಡಾಲ್, ಲೈಟಿಂಗ್ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಕೊರೊನಾ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತೇವೆ. ಹೀಗಾಗಿ, ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details