ಧಾರವಾಡ: ಮಾರ್ಚ್ 27 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಬೀದಿನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಎಸ್ಎಸ್ಎಲ್ಸಿ ಪರೀಕ್ಷೆ: ಬೀದಿ ನಾಟಕದ ಮೂಲಕ ಜಾಗೃತಿ - ಪಾಲಕರಿಗೆ ಪ್ರೇರಣೆ ಮತ್ತು ಪ್ರೋತ್ಸಾಹ
ಮಾರ್ಚ್ 27 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಲು ಧಾರವಾಡದಲ್ಲಿ ಬೀದಿನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೀದಿ ನಾಟಕ
ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ
ಬೀದಿನಾಟಕ ಕಾರ್ಯಕ್ರಮಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರಾದ ಸಿದ್ದಲಿಂಗಯ್ಯ ಹೀರೆಮಠ ಚಾಲನೆ ನೀಡಿದರು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳ ಹಾಗೂ ಪಾಲಕರ ಜಾಗೃತಿ ಚಿತ್ರಕಲಾ ಶಿಕ್ಷಕ ಬಾಬಾಜಾನ ಮುಲ್ಲಾ ರಚಿಸಿ ನಿರ್ದೇಶಿಸಿರುವ ಬೀದಿ ನಾಟಕ ಪ್ರದರ್ಶಿಸಲಾಯಿತು.