ಹುಬ್ಬಳ್ಳಿ :ಪರೀಕ್ಷೆ ಬರೆಯುವ ಮುನ್ನವೇ ಬಾಲಕಿಯೊಬ್ನಳು ಜೀವನದ ಪರೀಕ್ಷೆ ಮುಗಿಸಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವ ನಗರದಲ್ಲಿ ನಡೆದಿದೆ.
SSLC ಪರೀಕ್ಷೆ ಬರೆಯುವ ಮುನ್ನವೇ ಜೀವನದ ಪರೀಕ್ಷೆ ಮುಗಿಸಿದ ಬಾಲಕಿ! - ಧಾರವಾಡ ಅಪರಾಧ ಸುದ್ದಿ
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಾಲಕಿ ಆತ್ಮಹತ್ಯೆ
ಜ್ಯೋತಿ ರುದ್ರಪ್ಪ ಉಪ್ಪಾರ, ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಈಕೆ ನಗರದ ಚೇತನಾ ಪಬ್ಲಿಕ್ ಸ್ಕೂಲ್ನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ, ಪರೀಕ್ಷೆ ಬರೆಯುವ ಮುನ್ನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.