ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಸಂಚಾರಿ ಫೀವರ್ ಕ್ಲಿನಿಕ್ ಆರಂಭ: ಶೆಟ್ಟರ್ ಚಾಲನೆ - ಹುಬ್ಬಳ್ಳಿಯಲ್ಲಿ ಸಂಚಾರಿ ಫೀವರ್ ಕ್ಲಿನಿಕ್ ಆರಂಭ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಪ್ರಾದೇಶಿಕ ಕಾರ್ಯಾಗಾರದಲ್ಲಿ , ವರ್ಕ ಮ್ಯಾನೇಜರ್ ಶ್ರೀನಾಥ್ ಅವರ ತಂಡ ಬಸ್ ಅನ್ನು ಸಂಚಾರಿ ಫೀವರ್ ಕ್ಲಿನಿಕ್​ ಆಗಿ ಮಾರ್ಪಡಿಸಿದೆ.

Start of Traffic Beaver Clinic in Hubli
ಹುಬ್ಬಳ್ಳಿಯಲ್ಲಿ ಸಂಚಾರಿ ಪೀವರ್ ಕ್ಲಿನಿಕ್ ಆರಂಭ : ಶೆಟ್ಟರ್ ಚಾಲನೆ

By

Published : Apr 18, 2020, 10:07 PM IST

Updated : Apr 18, 2020, 10:28 PM IST

ಹುಬ್ಬಳ್ಳಿ: ಕೊರೊನಾ ಭೀತಿ ಹಿನ್ನೆಲೆ ಕೆಲವೊಂದು ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ನ್ನು​ ಸಂಚಾರಿ ಫೀವರ್ ಕ್ಲಿನಿಕ್​ ಆಗಿ ಮಾರ್ಪಡಿಸಿದೆ. ಜ್ವರ, ನೆಗಡಿ, ಕೆಮ್ಮು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ಸಂಚಾರಿ ಪೀವರ್ ಕ್ಲಿನಿಕ್ ಮೂಲಕ ಚಿಕಿತ್ಸೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಹುಬ್ಬಳ್ಳಿ ಧಾರವಾಡ ಪ್ರದೇಶದಲ್ಲಿನ ಸಂಚರಿಸಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡವರನ್ನು ಪರೀಕ್ಷಿಸಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸಂಚಾರಿ ಫೀವರ್ ಕ್ಲಿನಿಕ್ ಆರಂಭ : ಶೆಟ್ಟರ್ ಚಾಲನೆ
ನಗರದ ಬಿ.ಆರ್.ಟಿ.ಎಸ್. ಪ್ರಾದೇಶಿಕ ಬಸ್ ನಿಲ್ದಾಣದಲ್ಲಿನ ಕಂಟ್ರೋಲ್ ರೂಂ ಹಾಗೂ ಸಂಚಾರಿ ಫೀವರ್ ಕ್ಲಿನಿಕ್ ಪರಿಶೀಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿನೂತನ ಪ್ರಯತ್ನ ಮಾಡಲಾಗಿದೆ. ಬಸ್ ಅನ್ನು ಸಂಚಾರಿ ಫೀವರ್ ಕ್ಲಿನಿಕ್​ ಆಗಿ ಮಾರ್ಪಡಿಸಲಾಗಿದೆ. ಇದು ರಾಜ್ಯದ ಮೊದಲ ಸಂಚಾರಿ ಫೀವರ್ ಕ್ಲಿನಿಕ್ ಆಗಿದೆ. ಕೊವೀಡ್ -19 ಲಕ್ಷಣ ಕಂಡು ಬಂದರೆ ತಕ್ಷಣ ಅವರನ್ನು ಆ್ಯಂಬುಲೆನ್ಸ್ ಮೂಲಕ ಕಿಮ್ಸ್ ಕೋವಿಡ್​ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು. ಒಬ್ಬ ಡಾಕ್ಟರ್, ನರ್ಸ್, ಗ್ರೂಪ್ ಡಿ ನೌಕರರು ಸಂಚಾರಿ ಫೀವರ್ ಅಲ್ಲಿ ಕೆಲಸ ನಿರ್ವಹಿಸುತ್ತಾರೆ. ಥರ್ಮಲ್ ಸ್ಕ್ಯಾನರ್, ರಕ್ತ ಪರೀಕ್ಷೆ ನಡೆಸಲಾಗುವುದು. ಅಲ್ಲದೇ ಇತರ ಕಾಯಿಲೆಗಳಿಗೆ ಅಗತ್ಯ ಔಷಧೋಪಚಾರ ಸೌಲಭ್ಯ ನೀಡಲಾಗುವುದು ಎಂದರು. ಇನ್ನು ಅಗತ್ಯ ವಸ್ತುಗಳ ಮಾರಾಟಗಾರರು ಹಾಗೂ ತುರ್ತು ಸಂದರ್ಭಗಳ ಪಾಸು ವಿತರಿಸಲು ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. www.supportdharwad.in ಮೂಲಕ ವ್ಯಾಪಾರಿಗಳು ಮತ್ತು ವಿವಿಧ ತುರ್ತು ಉದ್ದೇಶಗಳಿಗೆ ಸಾರ್ವಜನಿಕರಿಗೆ ಇ-ಪಾಸ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪರಿಶೀಲಿಸಿ ಕ್ಯೂ ಆರ್ ಕೋಡ್ ಉಳ್ಳ ಪಾಸ್​ಗಳನ್ನು ವಿತರಿಸಲಾಗುವುದು. ಇದರಿಂದ ಪಾಸುಗಳ ದುರುಪಯೋಗವಾಗುವುದು ತಪ್ಪುತ್ತದೆ ಎಂದರು. ಹೊಸೂರಿನ ಬಿಆರ್ ಟಿ ಆಸ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಅವಳಿ ನಗರದಲ್ಲಿ, ಬಿಆರ್​ಟಿಎಸ್​ ಪಾಲಿಕೆ ಹಾಗೂ ಪೊಲೀಸ್ ಕಮಿಷನರೇಟ್ ಕಡೆಯಿಂದ ವಿವಿಧೆಡೆ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳನ್ನು ಸಂಪರ್ಕಿಸಿ ಮಾನಿಟರಿಂಗ್ ವ್ಯವಸ್ಥೆ ರೂಪಿಸಲಾಗಿದೆ. ಕೋವಿಡ್​​​-19 ಲಾಕ್ ಡೌನ್ ಪ್ರದೇಶಗಳಲ್ಲಿ ಜನರು ಅನಗತ್ಯವಾಗಿ ಸಂಚರಿಸುವುದು ಹಾಗೂ ಗುಂಪು ಸೇರುವುದನ್ನು ತಡೆಗಟ್ಟಲಾಗುತ್ತದೆ.
ಹುಬ್ಬಳ್ಳಿಯಲ್ಲಿ ಸಂಚಾರಿ ಪೀವರ್ ಕ್ಲಿನಿಕ್ ಆರಂಭ : ಶೆಟ್ಟರ್ ಚಾಲನೆ
ಅಲ್ಲದೇ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಹಾಗೂ ದೇಶಪಾಂಡೆ ಫೌಂಡೇಷನ್​ನಿಂದ ಕೋವಿಡ್ ಪಾಸಿಟಿವ್ ಸೋಂಕಿತರ ಸಂಪರ್ಕ ಸಂಗ್ರಹ, ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿಗಳ ನಿಗಾವಹಿಸುವಿಕೆಯ ಕೇಂದ್ರೀಕೃತ ಕಾರ್ಯವನ್ನು ಸಹ ನಿರ್ವಹಿಸಲಾಗುತ್ತಿದೆ ಎಂದರು.
Last Updated : Apr 18, 2020, 10:28 PM IST

ABOUT THE AUTHOR

...view details