ಕರ್ನಾಟಕ

karnataka

ETV Bharat / state

ವಿದೇಶ ಸುತ್ತಲು ಇರುವ ಸಮಯ ನೆರೆ ಸಂತ್ರಸ್ತರ ಭೇಟಿಗಿಲ್ಲ: ಪಿಎಂ ವಿರುದ್ಧ ಉಗ್ರಪ್ಪ ಟೀಕೆ

ದೇಶದ ಪ್ರಧಾನಿ ನರೇಂದ್ರ ಮೋದಿಗೆ ವಿದೇಶಗಳನ್ನು ಸುತ್ತಲು ಸಮಯವಿದೆ, ಆದರೆ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

By

Published : Sep 24, 2019, 7:42 PM IST

ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿಗೆ ವಿದೇಶಗಳನ್ನು ಸುತ್ತಲು ಸಮಯವಿದೆ. ಆದರೆ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ 1 ಲಕ್ಷ ಕೋಟಿಗೂ ಅಧಿಕ ನಷ್ಟ ಉಂಟಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ಸರ್ಕಾರ ಭೇಟಿ ನೀಡುತ್ತಿಲ್ಲ. ಕೇಂದ್ರ ಸರ್ವಾಧಿಕಾರಿ ಪ್ರಭಾವವನ್ನು ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಇನ್ನು ಸಿಎಂ ಸಿದ್ದರಾಮಯ್ಯ ಸಾಕಿದ ಗಿಣಿಗಳೇ ಅವರನ್ನು ಕುಕ್ಕುತ್ತಿವೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರದಲ್ಲಿ ಇದ್ದಾಗ ಏನೂ ಮಾತನಾಡದ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರದಿಂದ ಕೆಳಗೆ ಇಳಿದ ಕೂಡಲೇ ಹೀಗೆ ಮಾತನಾಡುತ್ತಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು‌.

ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗುವುದು‌. ಈ ಬಾರಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ‌ ಎಂದ ಅವರು ಹೆಚ್.ವಿಶ್ವನಾಥ ಆಡಿಯೋ ಸಿಡಿ ಬಿಡುಗಡೆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳೀದರು.

ABOUT THE AUTHOR

...view details