ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಅಪಹರಿಸಿ ಹಲ್ಲೆ: ಇಬ್ಬರ ಬಂಧನ, ಮತ್ತಿಬ್ಬರು ಪರಾರಿ - ವಿದ್ಯಾರ್ಥಿಗಳ ನಡುವೆ ಜಗಳ

ವಿದ್ಯಾರ್ಥಿನಿಯೋರ್ವಳನ್ನು ವಿದ್ಯಾರ್ಥಿ ಮಾತನಾಡಿಸಿರುವುದಕ್ಕೆ ಆತನನ್ನು ಅಪಹರಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

student is  kidnapping and assaulted for talk with  girl
ಗೋಕುಲ್ ರೋಡ್ ಠಾಣೆಯಲ್ಲಿ ಪ್ರಕರಣ

By

Published : Nov 15, 2022, 1:40 PM IST

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಗೋಕುಲ‌ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜ್​ನಲ್ಲಿ ವಿದ್ಯಾರ್ಥಿಯೊಬ್ಬ ಹುಡುಗಿಯನ್ನು ಮಾತನಾಡಿಸಿದ್ದಾನೆ ಎನ್ನಲಾಗಿದೆ.

ಈ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ಕೊನೆಗೆ ವಿದ್ಯಾರ್ಥಿಯನ್ನು ಅಪಹರಿಸಿದ ನಾಲ್ವರು ಯುವಕರು, ಕುಸುಗಲ್ಲ ರಸ್ತೆಯ ಮಿಡ್ ಮ್ಯಾಕ್ ಹಿಂದೆ ಕರೆದೊಯ್ದು ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ನಾಲ್ವರು ಸದಸ್ಯರ ಗುಂಪಿನಿಂದ ಅಪಹರಣ ನಡೆದಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕೇಶ್ವಾಪುರ ತಳವಾರ ಓಣಿಯ ಮಹಮ್ಮದ್ ಗೌಸ್, ಶಬರಿನಗರದ ಸೋಹೆಲ್​ ಬಂಧಿತರು. ಪ್ರತೀಕ ಮತ್ತು ಸೌರಭ್ ಪರಾರಿಯಾಗಿದ್ದಾರೆ. ಪರಾರಿಯಾದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗೋಕುಲ್ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಇಂಗ್ಲೆಂಡ್​ ಗೆಲುವು ಸಂಭ್ರಮಿಸಿದವರ ಮೇಲೆ ಜಮ್ಮು ಕಾಶ್ಮೀರ ವಿದ್ಯಾರ್ಥಿಗಳಿಂದ ಹಲ್ಲೆ

ABOUT THE AUTHOR

...view details