ಕರ್ನಾಟಕ

karnataka

ETV Bharat / state

ಬಸ್ ಸೌಲಭ್ಯಕ್ಕೆ ಆಗ್ರಹ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ರಾತ್ರಿಯಿಡೀ ಪ್ರತಿಭಟನೆ

ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Students and villagers protest in Hubli
ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

By

Published : Sep 16, 2022, 10:48 AM IST

ಹುಬ್ಬಳ್ಳಿ:ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ರಾತ್ರಿಯಿಡೀ ಬಸ್ ಮುಂದೆ ಕುಳಿತು ವಿದ್ಯಾರ್ಥಿಗಳು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.

ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಅಗಡಿ ಗ್ರಾಮದಿಂದ ಹೈಸ್ಕೂಲ್ ವಿದ್ಯಾಭ್ಯಾಸಕ್ಕೆ 5 ಕಿ. ಮೀ ದೂರದಲ್ಲಿನ ಅರಳಿಕಟ್ಟಿ ಗ್ರಾಮಕ್ಕೆ ವಿದ್ಯಾರ್ಥಿಗಳು ತೆರಳುತ್ತಾರೆ. ಸಂಜೆ 5 ಗಂಟೆಗೆ ಶಾಲೆ ಬಿಟ್ಟರೆ, ಬಸ್ ಇಲ್ಲದ ಕಾರಣ ರಾತ್ರಿ 10 ಗಂಟೆಗೆ ವಿದ್ಯಾರ್ಥಿಗಳು ಮನೆ ಸೇರುವ ದುಸ್ಥಿತಿ ಎದುರಾಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಇತ್ಯರ್ಥ ಆಗುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.‌

ಇದನ್ನೂ ಓದಿ:ದುರ್ಗದಲ್ಲಿ ರೈಲ್ವೆ ಕೆಳ ಸೇತುವೆ ತೆರೆಯುವಂತೆ ನಿವಾಸಿಗಳ ಪ್ರತಿಭಟನೆ : ಪೊಲೀಸರಿಂದ ಲಾಠಿ ಚಾರ್ಜ್

ABOUT THE AUTHOR

...view details