ಹುಬ್ಬಳ್ಳಿ :ಕಾಲೇಜುಗಳು ಇಂದಷ್ಟೇ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ. ಹಂತ ಹಂತವಾಗಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ, ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಲೇಜುಗಳ ಆರಂಭಿಸಲಾಗಿದೆ. ಹಂತ ಹಂತವಾಗಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಆಗಮಿಸುತ್ತಾರೆ ಎಂದರು.
ಕೆ.ಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿದ್ದು, ಬಂಧನದ ಅನಿವಾರ್ಯತೆಯಿತ್ತು.