ಕರ್ನಾಟಕ

karnataka

ETV Bharat / state

ಲ್ಯಾಪ್​ಟಾಪ್​ ವಿತರಣೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ಲ್ಯಾಪ್​ಟಾಪ್​ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಚಿತ ಲ್ಯಾಪ್​ಟಾಪ್ ಸೌಲಭ್ಯವನ್ನು ಪದವಿಯ ಮೂರು ವರ್ಷದ ವಿದ್ಯಾರ್ಥಿಗಳಿಗೂ ವಿತರಿಸಬೇಕೆಂದು ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Students protest
ವಿದ್ಯಾರ್ಥಿಗಳ ಪ್ರತಿಭಟನೆ

By

Published : Jan 27, 2020, 3:15 PM IST

ಧಾರವಾಡ:ಸರ್ಕಾರ ಉಚಿತವಾಗಿ‌ ನೀಡುತ್ತಿರುವ ಲ್ಯಾಪ್​ಟಾಪ್​ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡುವಂತೆ ಎನ್.ಎಸ್.ಯು.ಐ ವತಿಯಿಂದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ

ಕರ್ನಾಟಕ ಕಾಲೇಜು ಆವರಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಮಾರ್ಗಗಳಲ್ಲಿ ‌ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರಿಗೆ ಮನವಿ ಸಲ್ಲಿಸಲಾಯಿತು.

ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಣೆ ಯೋಜನೆ ಜಾರಿಗೆ ತಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ ಲ್ಯಾಪ್​​ಟಾಪ್​​ಅನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಚಿತ ಲ್ಯಾಪ್​ಟಾಪ್ ಸೌಲಭ್ಯವನ್ನು ಪದವಿಯ ಮೂರೂ ವರ್ಷದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಒದಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

ABOUT THE AUTHOR

...view details