ಧಾರವಾಡ:2019-2020 ಶೈಕ್ಷಣಿಕ ಸಾಲಿನ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಮತ್ತು ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡುವಂತೆ ಆಗ್ರಹಿಸಿ ಎಐಡಿಎಸ್ಒ, ಎಐಡಿವೈಒ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಲ್ಯಾಪ್ ಟಾಪ್ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಧಾರವಾಡದ ಕಲಾಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ವೃತ್ತಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿತು. ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
2019-20ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುತ್ತಿರುವುದು ಸಂತೋಷದ ಸಂಗತಿ. ಆದರೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆ ಸಿಗುತ್ತಿಲ್ಲ, ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕು ಎಂದು ಆಗ್ರಹಿಸಿದರು.
ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್ ನೀಡಿ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ನೀಡದಿದ್ದರೆ ತಾರತಮ್ಯ ಮಾಡಿದಂತಾಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕು ಎಂದು ಒತ್ತಾಯಿಸಿದರು.