ಕರ್ನಾಟಕ

karnataka

ETV Bharat / state

ಬೃಹತ್‌ ರೋಡ್‌ಶೋ ನಡೆಸಿ ಕುಂದಗೋಳದಲ್ಲಿ ಎಂ.ಆರ್.ಪಾಟೀಲ್ ನಾಮಪತ್ರ ಸಲ್ಲಿಕೆ - ETV Bharat kannada News

ಎಂ.ಆರ್.ಪಾಟೀಲ್ ಅವರು ನಾಮಪತ್ರ ಸಲ್ಲಿಸುವ ವೇಳೆ ಪ್ರಲ್ಹಾದ್ ಜೋಶಿ ಜೊತೆಗಿದ್ದರು.

MR Patil
ಎಂ.ಆರ್ ಪಾಟೀಲ್

By

Published : Apr 19, 2023, 5:34 PM IST

ನಾಮಪತ್ರ ಸಲ್ಲಿಸಿದ ಬಳಿಕ ಎಂ.ಆರ್.ಪಾಟೀಲ್ ಮಾಧ್ಯಮಗಳೊಂದಿಗೆ ಮಾತನಾಡಿದರು.

ಹುಬ್ಬಳ್ಳಿ : ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಹತ್ತಿರವಾಗುತ್ತಿದ್ದು, ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಅದರಂತೆ ತೀವ್ರ ಕುತೂಹಲ ಕೆರಳಿಸಿರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ್ ಅವರಿಂದು ಬೃಹತ್ ರೋಡ್ ಶೋ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.

ಕುಂದಗೋಳ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತೆರದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರು, ಚಾಂಜ್ ಮೇಳ, ಕರಡಿ ಕುಣಿತ, ಮಜಲು ಸೇರಿದಂತೆ ಇನ್ನಿತರ ಕಲಾತಂಡಗಳೊಂದಿಗೆ ಕಾಳಿದಾಸ ನಗರ, ಮಾರುಕಟ್ಟೆ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿವರೆಗೆ ಮೆರವಣಿಗೆಯಲ್ಲಿ ಅವರು ಆಗಮಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಇನ್ನಿತರ ನಾಯಕರು ಪಾಟೀಲರಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ :ಶಿಗ್ಗಾಂವಿಯಲ್ಲಿ ಸಿಎಂ ಭರ್ಜರಿ ರೋಡ್​ ಶೋ: ನಟ ಸುದೀಪ್​, ನಡ್ಡಾ ಜತೆಗೆ ಬಂದು ನಾಮಪತ್ರ ಸಲ್ಲಿಕೆ​.. ಕಾಂಗ್ರೆಸ್​​ ಅಂದರೆ ಭ್ರಷ್ಟಾಚಾರ ಎಂದು ನಡ್ಡಾ ವಾಗ್ದಾಳಿ

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಎಂ.ಆರ್.ಪಾಟೀಲ್, ಕಾರ್ಯಕರ್ತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಚಿಕ್ಕನಗೌಡರ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಅವರನ್ನು ಮನವೊಲಿಸುವ ಕೆಲಸವನ್ನು ನಮ್ಮ ನಾಯಕರು ಮಾಡಲಿದ್ದಾರೆ‌. ಕುಂದಗೋಳ ಕ್ಷೇತ್ರದ ಜನರು ಬಿಜೆಪಿ ಪರ ಒಲವು ತೋರಿಸುತ್ತಿದ್ದಾರೆ‌. ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ನಮ್ಮ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅವರ ಸಹೋದರ ಪ್ರದೀಪ್ ಶೆಟ್ಟರ್ ನಾಮಪತ್ರ ಸಲ್ಲಿಸಲು ಆಗಮಿಸಿ ಬೆಂಬಲ ಸೂಚಿಸಿದ್ದಾರೆ. ಕುಂದಗೋಳದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ: ರೋಡ್ ಶೋದಲ್ಲಿ ಭಾಗಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ರಾಜ್ಯ ಹಾಗೂ ಸರ್ಕಾರ ಮಾಡಿದ ಕೆಲಸ ಕಾರ್ಯಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಮತ ಚಲಾಯಿಸುವಂತೆ ಮನವಿ ಮಾಡಿದರು. ಎಂ.ಆರ್ ಪಾಟೀಲ್ 23 ದಿನಗಳ ನಂತರ ಎಂಎಲ್​ಎ ಪಾಟೀಲ್ ಆಗುತ್ತಾರೆ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ :ಹೊಸಪೇಟೆ ಬಿಜೆಪಿ ಅಭ್ಯರ್ಥಿ ಮೆರವಣಿಗೆಯಲ್ಲಿ ಬೆದರಿದ ಎತ್ತುಗಳು, ಹಲವರಿಗೆ ಗಾಯ

ABOUT THE AUTHOR

...view details