ಹುಬ್ಬಳ್ಳಿ: ಲಾಕ್ಡೌನ್ ಸಂದರ್ಭವನ್ನು ಸದುಪಯೋಗ ಪಡಿಸಿಕೊಂಡ ನೈಋತ್ಯ ರೈಲ್ವೆ ವಲಯ, ಹಲವಾರು ಜನಪರ ಕಾರ್ಯಗಳನ್ನು ತನ್ನ ಕೈಗೆತ್ತಿಕೊಂಡು ಸಾರ್ವಜನಿಕ ಸೇವೆಗೆ ಮುಂದಾಗಿದೆ. ಅದರಲ್ಲೂ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈಗ ತನ್ನ ಕಾರ್ಯವೈಖರಿಯನ್ನು ಮತ್ತಷ್ಟು ಚುರುಕುಗೊಳಿಸಿದೆ.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮತ್ತು ನೈರುತ್ಯ ರೈಲ್ವೆ ಇಲಾಖೆಗಳ ಪ್ರಧಾನ ಮುಖ್ಯಸ್ಥ ಅಜಯ್ ಕುಮಾರ್ ಸಿಂಗ್ ಅವರು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿನ ಹೊಟಗಿ ಮತ್ತು ಗದಗ ನಡುವಿನ ವಿಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಉದ್ದೇಶಿತ ದಿನಾಂಕಗಳಲ್ಲಿ ಅವುಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು.