ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದ ಐಸಿ ಲೇಮ್ ಸ್ಪಾರ್ಕಲ್ ಕ್ಯಾಂಡಲ್ ಉತ್ಪಾದನಾ ಕಾರ್ಖಾನೆಯಲ್ಲಿ, ಜು. 23 ರಂದು ಈ ದುರಂತ ಸಂಭವಿಸಿತ್ತು. ಈ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ತಾರಿಹಾಳ ಗ್ರಾಮದ ಚನ್ನವ್ವ ಮಂಜುನಾಥ ಅರಿವಾಳ (42) ಮೃತರು.
ಬ್ಲಾಸ್ಟ್ನಲ್ಲಿ ಎಂಟು ಜನ ಕಾರ್ಮಿಕರು ಗಾಯಗೊಂಡಿದ್ದರು. ಎಂಟು ಜನರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಆರು ಜನ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.