ಕರ್ನಾಟಕ

karnataka

By

Published : Sep 7, 2021, 9:25 PM IST

ETV Bharat / state

ಹುಬ್ಬಳ್ಳಿಯಲ್ಲಿ ವಿಭಿನ್ನವಾಗಿ ತಬಲಾ ವಾದ್ಯ ನುಡಿಸಿ ಜನಮನ್ನಣೆ ಗಳಿಸಿದ ಶಿಕ್ಷಕಿ

ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೆಚ್ಚುಗೆ ಪಡೆದಿದ್ದಾರೆ. ಜೊತೆಗೆ ಕೊರೊನಾ ವೇಳೆ ಮಕ್ಕಳಿಗೆ ವಿದ್ಯಾಭ್ಯಾಸ ಕುಂಠಿತವಾಗಬಾರದು ಎಂದು ಮನೆ ಮನೆಗೆ ತೆರಳಿ ಪಾಠ ಮಾಡುವ ಮೂಲಕ ವಿದ್ಯಾರ್ಥಿಗಳಿಗೂ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ..

teacher-kamala-narasari-who-famous-for-tabla-in-hubballi
ವಿಭಿನ್ನವಾಗಿ ತಬಲ ವಾದ್ಯ ನುಡಿಸುವ ಶಿಕ್ಷಕಿ

ಹುಬ್ಬಳ್ಳಿ :ತಾಲೂಕಿನ ಇಂಗಳಹಳ್ಳಿ ಗ್ರಾಮದ ಶಿಕ್ಷಕಿಯೊಬ್ಬರು ಹಲವಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದಾರೆ. ಜೊತೆಗೆ ತಮ್ಮ ಕಲೆಯಿಂದ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ.

ವಿಭಿನ್ನವಾಗಿ ತಬಲ ವಾದ್ಯ ನುಡಿಸುವ ಶಿಕ್ಷಕಿ

ತಾಲೂಕಿನ ಇಂಗಳಹಳ್ಳಿ ಗ್ರಾಮದ ಶಿಕ್ಷಕಿ ಹೆಸರು ಕಮಲಾ ನರಸರಿ. ತಾಲೂಕಿನ ರೇವಡಿಹಾಳ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ.

ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೆಚ್ಚುಗೆ ಪಡೆದಿದ್ದಾರೆ. ಜೊತೆಗೆ ಕೊರೊನಾ ವೇಳೆ ಮಕ್ಕಳಿಗೆ ವಿದ್ಯಾಭ್ಯಾಸ ಕುಂಠಿತವಾಗಬಾರದು ಎಂದು ಮನೆ ಮನೆಗೆ ತೆರಳಿ ಪಾಠ ಮಾಡುವ ಮೂಲಕ ವಿದ್ಯಾರ್ಥಿಗಳಿಗೂ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ.

ಮಕ್ಕಳ ಆಸಕ್ತಿಗೆ ಅನುಗುಣವಾಗಿ ವಿಷಯವನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಸಾಕಷ್ಟು ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಹೊಸ ರಾಷ್ಟೀಯ ಶಿಕ್ಷಣ ನೀತಿ ಸಹ ಕಲಿಕೆಗೆ ಒಂದು ಒಳ್ಳೆಯ ವೇದಿಕೆಯಾಗಿದೆ ಎಂಬುದು ಇವರ ಅಭಿಪ್ರಾಯವಾಗಿದೆ. ಮಕ್ಕಳ ಆಸಕ್ತಿಗೆ ತಕ್ಕಂತೆ ಕಲಿಸಬೇಕು ಎಂಬುದು ಇವರ ಮುಖ್ಯ ಉದ್ದೇಶವಾಗಿದೆ.

ಓದಿ:ಕೋವಿಡ್ ಸಂಕಷ್ಟದಲ್ಲಿ ವಿದ್ಯಾರ್ಥಿಗಳ ನೆರವಿಗೆ ನಿಂತ ಮಣಿಪಾಲದ ಮಾಹೆ ವಿವಿ..

ABOUT THE AUTHOR

...view details