ಹುಬ್ಬಳ್ಳಿ:ಕೇಂದ್ರೀಯ ಲೋಕಸೇವಾ ಆಯೋಗ ನಡೆಸುವ ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2021ನೇ ಸಾಲಿನ ಫಲಿತಾಂಶ ಸೋಮವಾರ ಪ್ರಕಟವಾಗಿತ್ತು. ಹುಬ್ಬಳ್ಳಿಯ ತಹಸಿನ್ ಬಾನು ದವಡಿ ಮೊದಲ ಪ್ರಯತ್ನದಲ್ಲೇ ಪರೀಕ್ಷೆಯನ್ನು ಪಾಸ್ ಮಾಡುವ ಮೂಲಕ, 482ನೇ ರ್‍ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಹುಬ್ಬಳ್ಳಿ ನಗರದ ಖಾದರ್ ಬಾಷಾ ಹಾಗೂ ಹಸೀನ ಬೇಗಂ ದಂಪತಿಯ ಪುತ್ರಿ ತಹಸಿನ್ ಬಾನು ಯುಪಿಎಸ್ಸಿಯಲ್ಲಿ ಉತ್ತೀರ್ಣರಾಗಿರುವ ರಾಜ್ಯದ ಏಕೈಕ ಮುಸ್ಲಿಂ ಯುವತಿಯಾಗಿದ್ದಾರೆ.
ಪ್ರಾಥಮಿಕ ಶಿಕ್ಷಣದದಿಂದ ಪಿಯುಸಿವರೆಗೆ ಹುಬ್ಬಳ್ಳಿ ನಗರದಲ್ಲೇ ವ್ಯಾಸಂಗ ಮಾಡಿರುವ ಬಾನು, ಬಳಿಕ ಧಾರವಾಡ ಕೃಷಿ ವಿವಿಯಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾರೆ. ಮಗಳ ಸಾಧನೆ ಬಗ್ಗೆ ಪೋಷಕರು ಹಾಗೂ ಕುಟುಂಬಸ್ಥರು ಸಂತಸಗೊಂಡಿದ್ದಾರೆ. ಇವರ ತಂದೆ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.